
ಪ್ರಜಾವಾಣಿ ವಾರ್ತೆ
ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯಕ್ಕೆ ‘ಸುವರ್ಣ ಗಂಗೆ’ ಎಂದು ಸಚಿವರ ಸಮ್ಮುಖದಲ್ಲಿ ಬುಧವಾರ ನಾಮಕರಣ ನಡೆಯಲಿದೆ.
ವಿಶ್ವವಿದ್ಯಾಲಯದ ಮಂಗಸಂದ್ರದಲ್ಲಿನ ಸ್ನಾತಕೋತ್ತರ ಕೇಂದ್ರದಲ್ಲಿ ಪಿ.ಎಂ.ಉಷಾ ಯೋಜನೆ ಅಡಿಯಲ್ಲಿ ₹ 10 ಕೋಟಿ ವೆಚ್ಚದಲ್ಲಿ ಮಹಿಳಾ ವಸತಿ ನಿಲಯದ ಕಾಮಗಾರಿಗೆ ಬೆಳಿಗ್ಗೆ 10.30ಕ್ಕೆ ಶಂಕುಸ್ಥಾಪನೆ ನೇರವೇರಲಿದೆ. ಇದೇ ಸಂದರ್ಭದಲ್ಲಿ ಸ್ನಾತಕೋತ್ತರ ಕೇಂದ್ರದ ಮೊದಲ ಮಹಡಿ ಉದ್ಘಾಟನೆಯೂ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.