ADVERTISEMENT

ಬೆಂಗಳೂರು | ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ: ನೋಟಿಸ್‌

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 0:00 IST
Last Updated 25 ಜುಲೈ 2025, 0:00 IST
<div class="paragraphs"><p>ಡಾ. ಅಂಬೇಡ್ಕರ್</p></div>

ಡಾ. ಅಂಬೇಡ್ಕರ್

   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣಾಭಿವೃದ್ಧಿ ವಿಭಾಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ್‌ ಭಾವಚಿತ್ರವನ್ನು ಮೂರು ತಿಂಗಳವರೆಗೆ ಸರಿಯಾದ ಜಾಗದಲ್ಲಿ ಹಾಕದೇ ಅಗೌರವ ತೋರಿದ ವಿಭಾಗದ ನಿರ್ದೇಶಕ ನೀಮ್‌ ಜ್ಞಾನದೇವ್‌ ಅವರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. 

ಬೆಂಗಳೂರು ವಿಶ್ವವಿದ್ಯಾಲಯದ ನಿಯಮ ಉಲ್ಲಂಘಿಸಿದ್ದು, ಈ ಬಗ್ಗೆ ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ನೋಟಿಸ್‌ ತಲುಪಿದ ಏಳು ದಿನಗಳಲ್ಲಿ ಸಮಂಜಸ ಉತ್ತರ ಬಾರದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವಿ.ವಿ ಕುಲಸಚಿವರು ತಿಳಿಸಿದ್ದಾರೆ.   

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.