ADVERTISEMENT

ಬೆಂಗಳೂರು | ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾಚಾರ; ಪಿ.ಜಿ ಮಾಲೀಕನ ಬಂಧನ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2025, 15:28 IST
Last Updated 3 ಆಗಸ್ಟ್ 2025, 15:28 IST
<div class="paragraphs"><p>ಅತ್ಯಾಚಾರ</p></div>

ಅತ್ಯಾಚಾರ

   

ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಪೇಯಿಂಗ್​ ಗೆಸ್ಟ್​ (ಪಿ.ಜಿ) ಮಾಲೀಕನನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಯುವತಿ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಪಿ.ಜಿ ಮಾಲೀಕ ಅಶ್ರಫ್ (37)​ ಎಂಬಾತನನ್ನು ಬಂಧಿಸಿದ್ದಾರೆ.

ಸೋಲದೇವನಹಳ್ಳಿ ಬಳಿಯ ಎಂಇಐ ಲೇಔಟ್‍ನಲ್ಲಿ ಮಹಿಳೆಯರಿಗೆ ಸುಮಾರು ಮೂರು ವರ್ಷಗಳಿಂದ ಆರೋಪಿ ನಡೆಸುತ್ತಿರುವ ಪೇಯಿಂಗ್ ಗೆಸ್ಟ್‌ಗೆ ವಿದ್ಯಾರ್ಥಿನಿಯು 10 ದಿನಗಳ ಹಿಂದೆಯಷ್ಟೇ ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

‘ಕೇರಳ ಮೂಲದ ವಿದ್ಯಾರ್ಥಿನಿ ನಗರದ ಖಾಸಗಿ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದಾರೆ. ಶುಕ್ರವಾರ ತಡರಾತ್ರಿ ವಿದ್ಯಾರ್ಥಿನಿ ಪೇಯಿಂಗ್ ಗೆಸ್ಟ್‌ ಆವರಣದಲ್ಲಿ ಒಬ್ಬರೇ ಇದ್ದರು. ಈ ವೇಳೆ ಆರೋಪಿಯು ಸಂತ್ರಸ್ತೆಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆಯು ಪ್ರತಿರೋಧ ತೋರಿದಾಗ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಕೃತ್ಯದ ಬಳಿಕ ಅತ್ಯಾಚಾರದ ಸಂಗತಿಯನ್ನು ಬಹಿರಂಗಪಡಿಸದಂತೆ ಮತ್ತು ದೂರು ಕೊಡದಂತೆ ಕೊಲೆ ಬೆದರಿಕೆ ಹಾಕಿದ್ದ’ ಎಂದು ಪೊಲೀಸರು ಹೇಳಿದ್ದಾರೆ.

ಅತ್ಯಾಚಾರದ ಬಳಿಕ ಆಕೆಯನ್ನು ಪೇಯಿಂಗ್ ಗೆಸ್ಟ್‌ಗೆ ವಾಪಸ್ ಕರೆದುಕೊಂಡು ಬಂದು ಬಿಟ್ಟಿದ್ದ. ಘಟನೆಯಿಂದ ಆಘಾತಗೊಂಡಿದ್ದ ಸಂತ್ರಸ್ತೆಯು ಸ್ನೇಹಿತೆಯರೊಂದಿಗೆ ಠಾಣೆಗೆ ಬಂದು ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಲಾಗಿದೆ. ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಆತನನ್ನು ಜೈಲಿಗೆ ಕಳುಹಿಸಲಾಗಿದೆ. ಆತನ ಪೂರ್ವಾಪರದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿ ದೂರು: ಘಟನೆ ಬಳಿಕ ಆರೋಪಿ ಪ್ರತಿ ದೂರು ನೀಡಿದ್ದು, ‘ಸಂತ್ರಸ್ತೆಯ ಸ್ನೇಹಿತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ತಿಳಿಸಿದ್ದಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.