
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಜಾತ್ರೆಗಳಲ್ಲಿ ಬೊಂಬೆ ಮಾರಾಟ ಮಾಡುತ್ತಾ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಿದ್ದ ದಂಪತಿಯನ್ನು ಕೆ.ಆರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗಾಯತ್ರಿ ಹಾಗೂ ಶ್ರೀಕಾಂತ್ ಬಂಧಿತರು.
ದೇವಸಂದ್ರದ ಬಳಿ ತೆರಳುತ್ತಿದ್ದ ದಂಪತಿಯ ಗಮನವನ್ನು ಬೇರೆಡೆಗೆ ಸೆಳೆದು ಕಳ್ಳತನ ಮಾಡುವಾಗ ಸಾರ್ವಜನಿಕರಿಗೆ ಆರೋಪಿಗಳು ಸಿಕ್ಕಿಬಿದ್ದಿದ್ದರು. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ವಿಚಾರಣೆ ನಡೆಸಿದಾಗ ಜಾತ್ರೆ, ಸಂತೆ ಹಾಗೂ ಬಸ್‌ಗಳಲ್ಲಿ ಜನರ ಗಮನವನ್ನು ಬೇರೆಡೆಗೆ ಸೆಳೆದು ಆಭರಣ ಕಳ್ಳತನ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.
ಬಂಧಿತರಿಂದ ₹60 ಲಕ್ಷ ಮೌಲ್ಯದ 398 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.