ADVERTISEMENT

ಬೆಂಗಳೂರು | ಪಾರ್ಕಿಂಗ್‌ ಸ್ಥಳಗಳಲ್ಲಿ ಬೈಕ್ ಕಳ್ಳತನ: ಆರೋಪಿ ಸೆರೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 19:59 IST
Last Updated 8 ಜುಲೈ 2025, 19:59 IST
<div class="paragraphs"><p>ಬಂಧನ </p></div>

ಬಂಧನ

   

ಬೆಂಗಳೂರು: ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡುತ್ತಿದ್ದ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಹೊರ ರಾಜ್ಯದ ಆರೋಪಿಯನ್ನು ಯಲಹಂಕ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಕದಿರಿಯ ರವಿನಾಯಕ್‌ (42) ಬಂಧಿತ ಆರೋಪಿ. ಬಂಧಿತನಿಂದ ₹ 30 ಲಕ್ಷ ಮೌಲ್ಯದ 40 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಮಾರುತಿ ನಗರದ ನಿವಾಸಿಯೊಬ್ಬರು ಏಪ್ರಿಲ್‌ 6ರಂದು ಮನೆಯ ಎದುರು ದ್ವಿಚಕ್ರ ವಾಹನವನ್ನು ನಿಲುಗಡೆ ಮಾಡಿದ್ದರು. ಹತ್ತು ನಿಮಿಷದ ನಂತರ ಬಂದು ನೋಡಿದಾಗ ಸ್ಥಳದಲ್ಲಿ ವಾಹನ ಇರಲಿಲ್ಲ. ಮಾಲೀಕರು ನೀಡಿದ ದೂರು ಆಧರಿಸಿ ತನಿಖೆ ನಡೆಸಿ ಆರೋಪಿಯನ್ನು ಬಾಗಲೂರು ಕ್ರಾಸ್‌ ಬಳಿ ಬಂಧಿಸಲಾಯಿತು. ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಆರೋಪಿ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ. ಕದ್ದ ವಾಹನಗಳನ್ನು ಆಂಧ್ರಪ್ರದೇಶಕ್ಕೆ ಕೊಂಡೊಯ್ದು ಮಾರಾಟ ಮಾಡುತ್ತಿದ್ದ. ಆಂಧ್ರಪ್ರದೇಶದ ವಿವಿಧೆಡೆ ಆರೋಪಿ ನಿಲುಗಡೆ ಮಾಡಿದ್ದ 27 ವಾಹನಗಳೂ ಸೇರಿದಂತೆ 40 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

‘ಆರೋಪಿಯ ಬಂಧನದಿಂದ ಯಲಹಂಕ ಸಂಪಿಗೆಹಳ್ಳಿ ಕೊಡಿಗೇಹಳ್ಳಿ ಅಮೃತಹಳ್ಳಿ ಅವಲಹಳ್ಳಿ ಚಿಕ್ಕಬಳ್ಳಾಪುರ ಹೊಸಕೋಟೆ ಹೆಬ್ಬಾಳ ನಂದಿಗಿರಿ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳು ಪತ್ತೆಯಾಗಿವೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.