ADVERTISEMENT

ಬೆಂಗಳೂರಿನಲ್ಲಿ ಪಿಎಫ್‌ಐ ಸಂಘಟನೆಯ 19 ಮಂದಿ ವಿರುದ್ಧ ಎಫ್‌ಐಆರ್: 14 ಜನ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 13:29 IST
Last Updated 22 ಸೆಪ್ಟೆಂಬರ್ 2022, 13:29 IST
   

ಬೆಂಗಳೂರು: ಕಾನೂನು ಬಾಹಿರ ಚಟುವಟಿಕೆ ಹಾಗೂ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಹೊಂದಿದ್ದ ಆರೋಪದಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ 19 ಮಂದಿ ವಿರುದ್ಧ ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪೈಕಿ ಆರೋಪಿಗಳಾದ ಮನ್ಸೂರ್ ಖಾನ್ ಯಾಸೀರ್ ಪಾಷಾ ಸೇರಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ದೇಶ ವಿರೋಧಿ ಚಟುವಟಿಕೆ ಬಗ್ಗೆ ಮಾಹಿತಿ ಬಂದಿತ್ತು. ಕೆ.ಜಿ. ಹಳ್ಳಿ ಹಾಗೂ ಗೋವಿಂದಪುರ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.ಪಿಎಫ್‌ಐ ಸಂಘಟನೆ ಮುಖಂಡರು ಹಾಗೂ ಕಾರ್ಯಕರ್ತರ ಮನೆ ಹಾಗೂ ಕಚೇರಿಗಳಲ್ಲಿ ಪರಿಶೀಲನೆ ನಡೆಸಲಾಯಿತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಸಿಸಿಬಿ ಹಾಗೂ ನಗರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಎನ್‌ಐಎ ಹಾಗೂ ಇತರೆ ತನಿಖಾ ತಂಡಗಳ ಅಧಿಕಾರಿಗಳೂ ಪ್ರತ್ಯೇಕವಾಗಿ ರಾಜ್ಯದಾದ್ಯಂತ ಕಾರ್ಯಾಚರಣೆ ನಡೆಸಿದ್ದಾರೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.