ADVERTISEMENT

ಕದ್ದ ವಾಹನಗಳನ್ನು ಬಾಲಕನ ಮೂಲಕ ಮಾರುತ್ತಿದ್ದ ಜಾಲ ಭೇದಿಸಿದ ಬೆಂಗಳೂರು ಪೊಲೀಸರು

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 4:31 IST
Last Updated 26 ಜುಲೈ 2022, 4:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕದ್ದ ವಾಹನಗಳನ್ನು ಬಾಲಕನ ಮೂಲಕ ಮಾರಾಟ ಮಾಡುತ್ತಿದ್ದ ಜಾಲವನ್ನು ಸುಬ್ರಮಣ್ಯನಗರ ಪೊಲೀಸರು ಭೇದಿಸಿದ್ದು,₹3.50 ಲಕ್ಷ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

‘ಆರ್‌.ಪಿ. ರಸ್ತೆಯಲ್ಲಿ ಬಾಲಕ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೊರಟಿದ್ದ. ಆತನ ಬಗ್ಗೆ ಅನುಮಾನಗೊಂಡಿದ್ದ ಗಸ್ತು ಸಿಬ್ಬಂದಿ, ತಡೆದು ತಪಾಸಣೆ ನಡೆಸಿದ್ದರು. ವಾಹನಗಳ ಬಗ್ಗೆ ಸೂಕ್ತ ಮಾಹಿತಿ ನೀಡದಿದ್ದರಿಂದ ಠಾಣೆಗೆ ಕರೆತಂದು ವಿಚಾರಿಸಿದಾಗಲೇ ಜಾಲದ ಕೃತ್ಯ ಬಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಬಾಲಕನಿಂದಲೇ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಈತನನ್ನು ವಶಕ್ಕೆ ಪಡೆದು ಬಾಲ ನ್ಯಾಯ ಮಂಡಳಿ ಎದುರು ಹಾಜರುಪಡಿಸಲಾಗಿದೆ. ಈತನ ಮೂಲಕ ವಾಹನ ಮಾರಾಟ ಮಾಡಿಸುತ್ತಿದ್ದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.