ADVERTISEMENT

ಕರ್ತವ್ಯ ಲೋಪ ಎಸಗಿದರೆ ಕಠಿಣ ಕ್ರಮ: ಕಮಿಷನರ್‌ ಸೀಮಾಂತ್‌ಕುಮಾರ್

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 16:24 IST
Last Updated 9 ಜನವರಿ 2026, 16:24 IST
ಸಿಎಆರ್‌ ಕೇಂದ್ರಸ್ಥಾನದ ಕವಾಯತು ಮೈದಾನದಲ್ಲಿ ಶುಕ್ರವಾರ ನಡೆದ ತಿಂಗಳ ಕವಾಯತಿನಲ್ಲಿ ಪೊಲೀಸರು ಪಥಸಂಚಲನ ನಡೆಸಿದರು  
ಸಿಎಆರ್‌ ಕೇಂದ್ರಸ್ಥಾನದ ಕವಾಯತು ಮೈದಾನದಲ್ಲಿ ಶುಕ್ರವಾರ ನಡೆದ ತಿಂಗಳ ಕವಾಯತಿನಲ್ಲಿ ಪೊಲೀಸರು ಪಥಸಂಚಲನ ನಡೆಸಿದರು     

ಬೆಂಗಳೂರು: ಅಪರಾಧ ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ನಗರ ಪೊಲೀಸರ ಕಾರ್ಯ ಉತ್ತಮವಾಗಿದೆ. ಅದೇ ರೀತಿ ಅಪರಾಧಗಳಲ್ಲಿ ತೊಡಗಿದವರಿಗೆ ಶಿಕ್ಷೆ ಕೊಡಿಸುವ ಬಗ್ಗೆಯೂ ಗಮನಹರಿಸಬೇಕು ಎಂದು ನಗರ ಪೊಲೀಸ್‌ ಕಮಿಷನರ್‌ ಸೀಮಾಂತ್‌ಕುಮಾರ್ ಸೂಚಿಸಿದರು.

ಸಿಎಆರ್‌ ಕೇಂದ್ರಸ್ಥಾನದ ಕವಾಯತು ಮೈದಾನದಲ್ಲಿ ಶುಕ್ರವಾರ ನಡೆದ ತಿಂಗಳ ಕವಾಯತಿನಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

‘ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡವರಿಗೆ ಶಿಕ್ಷೆ ಕೊಡಿಸಬೇಕು. ತನಿಖಾ ಹಂತದಲ್ಲಿ ಲೋಪ ಎಸಗಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

ಕೆಲವು ಕಡೆಗಳಲ್ಲಿ ಪೊಲೀಸರು ಕರ್ತವ್ಯ ಲೋಪ ಎಸಗುತ್ತಿದ್ದಾರೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಪರಾಧಗಳನ್ನು ಕಡಿಮೆ ಮಾಡಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಯ ಕರ್ತವ್ಯ. ನಾವೆಲ್ಲರೂ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.

‘ಯಾವುದೇ ಘಟನೆ ನಡೆದರೂ ಮಾಹಿತಿ ಬಂದ ತಕ್ಷಣ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು’ ಎಂದು ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.