ಬೆಂಗಳೂರು: ಮಾದಕ ವಸ್ತು ಸರಬರಾಜು ಹಾಗೂ ಮಾರಾಟದಲ್ಲಿ ಭಾಗಿಯಾಗಿದ್ದವರ ವಿರುದ್ಧ ನಗರದ ಉತ್ತರ ವಿಭಾಗದ 13 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 180ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ತಪಾಸಣೆ ನಡೆಸಿದರು.
ಮಾದಕವಸ್ತು ಮಾರಾಟ ಮಾಡುತ್ತಿದ್ದ ಮೂವರ ವಿರುದ್ಧ ಮಲ್ಲೇಶ್ವರ, ಆರ್.ಟಿ.ನಗರ, ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಿಸಿ 2 ಕೆ.ಜಿ. 450 ಗ್ರಾಂ ಗಾಂಜಾ ವಶ ಪಡಿಸಿಕೊಂಡಿದ್ದಾರೆ.
ಅಲ್ಲದೇ, ಮಾದಕ ವಸ್ತು ಸೇವನೆ ಮಾಡುತ್ತಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಾರಂಟ್, ಪ್ರೊಕ್ಲಮೇಷನ್ ಆಗಿರುವವರ ವಿರುದ್ಧ ಪರಿಶೀಲನೆ ನಡೆಸಿದ್ದರು. ಐವರು ಘೋಷಿತ ಅಪರಾಧಿಗಳು, ಇಬ್ಬರು ವಾರಂಟ್ ಆರೋಪಿತರನ್ನು ಪತ್ತೆ ಮಾಡಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.