ADVERTISEMENT

ಬೆಂಗಳೂರು | ₹1.6 ಕೋಟಿ ಮೌಲ್ಯದ 641 ಮೊಬೈಲ್ ವಶ: ವಾರಸುದಾರರಿಗೆ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 15:40 IST
Last Updated 1 ಮಾರ್ಚ್ 2026, 15:40 IST
ಆರೋಪಿಗಳಿಂದ ವಶ ಪಡಿಸಿಕೊಂಡಿರುವ ಮೊಬೈಲ್‌ ಫೋನ್‌ಗಳು.
ಆರೋಪಿಗಳಿಂದ ವಶ ಪಡಿಸಿಕೊಂಡಿರುವ ಮೊಬೈಲ್‌ ಫೋನ್‌ಗಳು.   

ಬೆಂಗಳೂರು: ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಸಿಇಐಆರ್ ತಂತ್ರಾಂಶದ ಮೂಲಕ ಪತ್ತೆಯಾಗಿದ್ದ ₹1.6 ಕೋಟಿ ಮೌಲ್ಯದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಜನವರಿಯಿಂದ ಈವರೆಗೆ ಪೂರ್ವ ವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, 641 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ.

ಇಂದಿರಾ ನಗರದಲ್ಲಿ ನಡೆದ ಮಾಸಿಕ ಜನ ಸಂಪರ್ಕ ಸಭೆಯಲ್ಲಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ವಾರಸುದಾರರಿಗೆ ಮೊಬೈಲ್ ಫೋನ್‌ ಹಸ್ತಾಂತರಿಸಿದರು.

ADVERTISEMENT

ಜಂಟಿ ಪೊಲೀಸ್ ಕಮಿಷನರ್ ಬಿ.ರಮೇಶ್‌, ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್‌ ಸುಧೀರ್ ರೆಡ್ಡಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.