ADVERTISEMENT

ಬೆಂಗಳೂರು: ತಪ್ಪಿಸಿಕೊಂಡಿದ್ದ 2 ವರ್ಷದ ಮಗು ಪೋಷಕರಿಗೆ ಒಪ್ಪಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 18:28 IST
Last Updated 17 ಜನವರಿ 2026, 18:28 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಎ.ಐ ಚಿತ್ರ

ಬೆಂಗಳೂರು: ಒಂಟಿಯಾಗಿ ಓಡಾಡುತ್ತಿದ್ದ ಎರಡು ವರ್ಷದ ಮಗುವನ್ನು ಹೊಯ್ಸಳ ಪೊಲೀಸರು ರಕ್ಷಿಸಿ, ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿದ್ದಾರೆ.

ADVERTISEMENT

ಜನವರಿ 14ರಂದು ಬೆಳಿಗ್ಗೆ 10.50ರ ಸುಮಾರಿಗೆ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ತಿಗುಪ್ಪೆ ಹೊಸಕೆರೆಹಳ್ಳಿ ಮೇಲ್ಸೇತುವೆ ಸಮೀಪದ ರಸ್ತೆಯಲ್ಲಿ ಎರಡು ವರ್ಷದ ಮಗು ಒಂಟಿಯಾಗಿ ಹೋಗುತ್ತಿತ್ತು. ಮಗುವನ್ನು ಗಮನಿಸಿದ ಸಾರ್ವಜನಿಕರೊಬ್ಬರು ತಕ್ಷಣ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಕಾರ್ಯಪ್ರವೃತ್ತರಾದ ಸಹಾಯವಾಣಿ ಸಿಬ್ಬಂದಿ, ಗಿರಿನಗರ ಪೊಲೀಸ್ ಠಾಣೆಯ ಹೊಯ್ಸಳ ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೆಬಲ್ ಮಾರುತಿ ಹಾಗೂ ತಂಡದವರಿಗೆ ಮಾಹಿತಿ ರವಾನಿಸಿದರು. ನಾಲ್ಕು ನಿಮಿಷದೊಳಗೆ ಸ್ಥಳಕ್ಕೆ ಹೋಗಿ ಮಗುವನ್ನು ರಕ್ಷಿಸಿದರು. ನಂತರ ಮಗುವಿನ ಪೋಷಕರನ್ನು ಪತ್ತೆ ಮಾಡಿ ಸುರಕ್ಷಿತವಾಗಿ ಒಪ್ಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.