ADVERTISEMENT

ಬೆಂಗಳೂರು | ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ್ದ 9 ಯುವತಿಯರ ರಕ್ಷಣೆ

‘ಸಿಯಾಮೆಸೆ ಥೈ’ ಸ್ಪಾ ಮೇಲೆ ದಾಳಿ: ಯುವತಿಯರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 19:36 IST
Last Updated 17 ಜೂನ್ 2022, 19:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸದಾಶಿವನಗರ ಠಾಣೆ ವ್ಯಾಪ್ತಿಯಲ್ಲಿರುವ ‘ಸಿಯಾಮೆಸೆ ಥೈ ಸ್ಪಾ’ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ್ದ 9 ಯುವತಿಯರನ್ನು ರಕ್ಷಿಸಿದ್ದಾರೆ.

‘ಮಳಿಗೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಗುರುವಾರ ದಾಳಿ ಮಾಡಿ ಕೆಲವರನ್ನು ಬಂಧಿಸಲಾಗಿದೆ‘ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಉದ್ಯೋಗದ ಆಮಿಷವೊಡ್ಡಿ ಥಾಯ್ಲೆಂಡ್‌ನಿಂದ ಯುವತಿಯರನ್ನು ಕರೆಸಿದ್ದ ಆರೋಪಿಗಳು, ಮಳಿಗೆಯಲ್ಲಿ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಮಸಾಜ್‌ ಹೆಸರಿನಲ್ಲಿ ಜಾಹೀರಾತು ನೀಡಿ ಗ್ರಾಹಕ ರನ್ನು ಮಳಿಗೆಗೆ ಕರೆದು, ವೇಶ್ಯಾವಾಟಿಕೆ ನಡೆಸುತ್ತಿದ್ದರು. ರಕ್ಷಿಸಲಾದ ಯುವತಿ ಯರನ್ನು ಅವರ ದೇಶಕ್ಕೆ ಕಳುಹಿಸಲು ಕ್ರಮಕೈಗೊಳ್ಳಲಾಗಿದೆ’ ಎಂದೂ ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.