ADVERTISEMENT

ಬೆಂಗಳೂರು: ನಕಲಿ ನೋಂದಣಿ ಸಂಖ್ಯೆ ಅಳವಡಿಸಿಕೊಂಡಿದ್ದ 19 ವಾಹನ ಜಪ್ತಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 15:49 IST
Last Updated 23 ಫೆಬ್ರುವರಿ 2026, 15:49 IST
ವಾಹನ ತಡೆದು ಪರಿಶೀಲನೆ ನಡೆಸಿದ ಪೊಲೀಸರು 
ವಾಹನ ತಡೆದು ಪರಿಶೀಲನೆ ನಡೆಸಿದ ಪೊಲೀಸರು    

ಬೆಂಗಳೂರು: ಅಪರಾಧ ಪ್ರಕರಣಗಳ ನಿಯಂತ್ರಣ ಹಾಗೂ ಆರೋಪಿಗಳ ಪತ್ತೆಯ ಉದ್ದೇಶದಿಂದ ನಗರ ಪೊಲೀಸರು ರಾತ್ರಿ ವೇಳೆ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಇದುವರೆಗೆ ನಡೆದ ಕಾರ್ಯಾಚರಣೆಯಲ್ಲಿ ನಕಲಿ ನೋಂದಣಿ ಸಂಖ್ಯೆ ಅಳವಡಿಸಿಕೊಂಡಿದ್ದ 19 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ನಾಲ್ಕು ಚಕ್ರದ 929 ವಾಹನಗಳು, 671 ತ್ರಿಚಕ್ರ ವಾಹನಗಳು, 3,644 ದ್ವಿಚಕ್ರ ವಾಹನಗಳನ್ನು ತಡೆದು ಪರಿಶೀಲನೆ ನಡೆಸಲಾಗಿದೆ. 2,737 ವ್ಯಕ್ತಿಗಳ ವಿಚಾರಣೆ ನಡೆಸಲಾಗಿದೆ. ನಕಲಿ ನೋಂದಣಿ ಸಂಖ್ಯೆ ಅಳವಡಿಸಿಕೊಂಡಿದ್ದ 19 ವಾಹನ ವಶಕ್ಕೆ ಪಡೆಯಲಾಗಿದೆ. ಮದ್ಯ ಕುಡಿದು ವಾಹನ ಚಾಲನೆ ಮಾಡುತ್ತಿದ್ದ 46 ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಮಾದಕ ವಸ್ತುಗಳ ಸೇವನೆ ಮತ್ತು ಸಾಗಣೆ, ಸರಗಳ್ಳತನ, ಮೊಬೈಲ್‌ ಕಳ್ಳತನ, ದರೋಡೆ, ಸಂಚಾರ ನಿಯಮ ಉಲ್ಲಂಘನೆ ಹಾಗೂ ಸಮಾಜಘಾತುಕ ಕೃತ್ಯಗಳನ್ನು ತಡೆಗಟ್ಟಲು ಈ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಹಿಂದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಕಾರ್ಯಾಚರಣೆ ವೇಳೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.