ADVERTISEMENT

ಪ್ರಚೋದನಕಾರಿ ಪೋಸ್ಟ್‌: 60 ಖಾತೆ ನಿಷ್ಕ್ರಿಯಗೊಳಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 0:41 IST
Last Updated 10 ಅಕ್ಟೋಬರ್ 2025, 0:41 IST
<div class="paragraphs"><p>ಸಾಮಾಜಿಕ ಜಾಲತಾಣ</p></div>

ಸಾಮಾಜಿಕ ಜಾಲತಾಣ

   

ರಾಯಿಟರ್ಸ್ ಚಿತ್ರ

ಬೆಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕುತ್ತಿದ್ದ 60ಕ್ಕೂ ಹೆಚ್ಚು ಖಾತೆಗಳನ್ನು ನಗರದ ವಿವಿಧ ಠಾಣೆಗಳ ಸಾಮಾಜಿಕ ಜಾಲತಾಣ ವಿಭಾಗದ ಸಿಬ್ಬಂದಿ ನಿಷ್ಕ್ರಿಯಗೊಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ADVERTISEMENT

ಸಾಮಾಜಿಕ ಜಾಲತಾಣಗಳಲ್ಲಿ ರೌಡಿಶೀಟರ್‌ಗಳ ಪರ ವಿಡಿಯೊ ಹಾಗೂ ಫೋಟೊಗಳು ಅಪ್‌ಲೋಡ್ ಮಾಡುತ್ತಿದ್ದವರನ್ನೂ ರೌಡಿಪಟ್ಟಿಗೆ ಸೇರಿಸಿದ್ದ ಪೊಲೀಸರು ಇದೀಗ ಅವರ ಖಾತೆಗಳನ್ನು ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಗೊತ್ತಾಗಿದೆ.

ದಕ್ಷಿಣ ವಿಭಾಗದ ಪೊಲೀಸರು 17 ಖಾತೆಗಳನ್ನು ನಿಷ್ಕ್ರಿಯಗೊ‍ಳಿಸಿದ್ದಾರೆ. ಜತೆಗೆ, ಅವುಗಳ ಅಡ್ಮಿನ್‌ಗಳಿಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಮತ್ತೊಮ್ಮೆ ಇಂತಹ ಪೋಸ್ಟ್‌ ಅಥವಾ ವಿಡಿಯೊಗಳನ್ನು ಅಪ್‌ಲೋಡ್‌ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಪೋಸ್ಟ್‌ಗಳನ್ನು ಹಾಕುವ ಖಾತೆಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.