
ಬೆಂಗಳೂರು: ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಭಾರತೀಯ ವಿಜ್ಞಾನ ಸಂಸ್ಥೆಯ 66/11ಕೆವಿ ಉಪಕೇಂದ್ರದ ವ್ಯಾಪ್ತಿಯಲ್ಲಿ ಅ.25ರಂದು ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮಲ್ಲೇಶ್ವರ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೊನಿ, ಸುಬೇದಾರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ಎಕ್ಸ್‌ಟೆನ್ಷನ್, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯರಸ್ತೆ, ಮಾಡೆಲ್ ಕಾಲೊನಿ, ಷರೀಫ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.