ADVERTISEMENT

ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ: ಇಲ್ಲಿದೆ ಮಾಹಿತಿ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2025, 21:40 IST
Last Updated 27 ಅಕ್ಟೋಬರ್ 2025, 21:40 IST
   

ಬೆಂಗಳೂರು: ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ 66/11ಕೆವಿ ಪುಟ್ಟೇನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ಅಕ್ಟೋಬರ್‌ 28ರಂದು ಬೆಳಿಗ್ಗೆ ‌11ರಿಂದ ಸಂಜೆ 4ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ರಾಮ್ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಮಾರುತಿ ರಾಯಲ್ ಗಾರ್, ಮಾರುತಿ ನಗರ, ಕೋಗಿಲು, ಪೂಜಾ ಮಹಾಲಕ್ಷ್ಮಿ, ಸಪ್ತಗಿರಿ, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್‌ಕ್ಲೇವ್, ಎಸ್‌ಎನ್‌.ಹಳ್ಳಿ, ಮೈಲಪನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT