ಬೆಂಗಳೂರು: ಪೆರೋಲ್ ಮೇಲೆ ಹೊರ ಬಂದಿದ್ದ ಕೈದಿ ಮೊಹಮ್ಮದ್ ಇದ್ರೀಸ್ ಎಂಬಾತ ವಾಪಸ್ ಜೈಲಿಗೆ ಮರಳದೆ ತಲೆಮರೆಸಿಕೊಂಡಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಲಾಗಿದೆ.
ಕೇಂದ್ರ ಕಾರಾಗೃಹ ಅಧೀಕ್ಷಕ ಇಮಾಮ್ ಸಾಬ್ ಮ್ಯಾಗೇರಿ ಅವರ ದೂರಿನ ಮೇರೆಗೆ ಮೊಹಮ್ಮದ್ ಇದ್ರೀಸ್, ಈತನಿಗೆ ಜಾಮೀನು ನೀಡಿದ್ದ ಅಖಿಲಾಭಾನು ಮತ್ತು ಹರಿಪ್ರಸಾದ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.