ಅಪಘಾತ
–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಬಳ್ಳಾರಿ ರಸ್ತೆಯ ಮೇಕ್ರಿ ವೃತ್ತದ ಬಳಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಲೂಯಿಸ್ ಫರ್ನಾಂಡಿಸ್ (23) ಎಂಬುವರು ಮೃತಪಟ್ಟಿದ್ದಾರೆ.
ತಮಿಳುನಾಡಿನ ಅವರು ಥಣಿಸಂದ್ರದಲ್ಲಿ ವಾಸವಾಗಿದ್ದರು. ಹೆಬ್ಬಾಳದ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಲೂಯಿಸ್ ಅವರು ಕೆಲಸದ ನಿಮಿತ್ತ ಬೈಕ್‍ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಸ್ ಡಿಕ್ಕಿ ಹೊಡೆದಿದೆ. ಆಗ ಕೆಳಗೆ ಬಿದ್ದ ಅವರ ತಲೆಯ ಮೇಲೆ ಬಸ್‌ನ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್ ಚಾಲಕನನ್ನು ಬಂಧಿಸಿ ವಾಹನ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಸದಾಶಿವನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.