ADVERTISEMENT

ಬೆಂಗಳೂರು: ಬಿಟಿಎಂ ಬಡಾವಣೆಯಲ್ಲಿ ಆಸ್ತಿ ವಶ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2025, 14:39 IST
Last Updated 28 ಅಕ್ಟೋಬರ್ 2025, 14:39 IST
ಬಿಟಿಎಂ ಬಡಾವಣೆಯಲ್ಲಿ ಜೆಸಿಬಿ ಮೂಲಕ ಅಕ್ರಮ ಶೆಡ್‌ ತೆರವು ಮಾಡಲಾಯಿತು. 
ಬಿಟಿಎಂ ಬಡಾವಣೆಯಲ್ಲಿ ಜೆಸಿಬಿ ಮೂಲಕ ಅಕ್ರಮ ಶೆಡ್‌ ತೆರವು ಮಾಡಲಾಯಿತು.    

ಬೆಂಗಳೂರು: ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದುವರಿಸಿದ್ದು, ಮಂಗಳವಾರ ನಡೆದ ಕಾರ್ಯಾಚರಣೆಯಲ್ಲಿ ಬಿಟಿಎಂ 1ನೇ ಹಂತದಲ್ಲಿ ₹12.25 ಕೋಟಿ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿಯ ತಾವರೆಕೆರೆ ಗ್ರಾಮದ ಸರ್ವೆ ನಂ. 50ರಲ್ಲಿ 6,629 ಚದರ ಅಡಿ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್ ಹಾಗೂ ಕಾಂಪೌಂಡ್ ಅನ್ನು ತೆರವುಗೊಳಿಸಿ, ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಪ್ರದೇಶವನ್ನು ವಶಪಡಿಸಿಕೊಂಡು, ಸುತ್ತಲೂ ಬೇಲಿ ಹಾಕಿದೆ.

ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ಕಾರ್ಯಪಾಲಕ ಎಂಜಿನಿಯರ್‌ಗಳು, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು ಹಾಗೂ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಯಿತು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.