ADVERTISEMENT

ಬೆಂಗಳೂರು: ಪಬ್‌, ರೆಸ್ಟೋರೆಂಟ್ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2025, 23:30 IST
Last Updated 13 ಜುಲೈ 2025, 23:30 IST
   

ಬೆಂಗಳೂರು: ನಗರದ ವಿವಿಧೆಡೆ ಪಬ್, ರೆಸ್ಟೋರೆಂಟ್‌ಗಳ ಮೇಲೆ ಶನಿವಾರ ರಾತ್ರಿ ಸಿಸಿಬಿ (ಮಾದಕ ದ್ರವ್ಯ ನಿಗ್ರಹ ದಳ) ಹಾಗೂ ವಿದೇಶೀಯರ ವಿಭಾಗೀಯ ನೋಂದಣಾಧಿಕಾರಿ ಕಚೇರಿ (ಎಫ್‌ಆರ್‌ಆರ್‌ಒ) ಅಧಿಕಾರಿಗಳ ತಂಡ ಜಂಟಿಯಾಗಿ ದಾಳಿ ನಡೆಸಿ, ಮಾದಕವಸ್ತುಗಳನ್ನು ಜಪ್ತಿ ಮಾಡಿದೆ.

ಎಂ.ಜಿ. ರಸ್ತೆ, ಬ್ರಿಗೇಡ್‌ ರಸ್ತೆ, ಟ್ರಿನಿಟಿ ಸರ್ಕಲ್, ಚರ್ಚ್ ಸ್ಟ್ರೀಟ್‌, ಕೋರಮಂಗಲದ ಹಲವು ಕಡೆ ಕ್ಲಬ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಿದೇಶಿ ಡ್ರಗ್ಸ್ ಪೆಡ್ಲರ್‌ ಒಬ್ಬನನ್ನು ಬಂಧಿಸಿದ್ದು, ಎಷ್ಟು ಮೊತ್ತದ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂಬುದನ್ನು ಬಹಿರಂಗಪಡಿಸಿಲ್ಲ. ಈ ಬಗ್ಗೆ ಕಬ್ಬನ್ ಪಾರ್ಕ್ ಹಾಗೂ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್‍ಐಆರ್ ದಾಖಲಿಸಿದ್ದಾರೆ.

ನೈಜೀರಿಯಾದ ಪೆಡ್ಲರ್‌ನನ್ನು ವಶಕ್ಕೆ ಪಡೆದು ಎಫ್‍ಆರ್‌ಆರ್‌ ಅಧಿಕಾರಿಗಳು ವಿಚಾರಣೆ ನಡೆಸಿದಾಗ, ವೀಸಾ ಅವಧಿ ಮುಕ್ತಾಯಗೊಂಡಿದ್ದರೂ ನಗರದಲ್ಲಿ ಅಕ್ರಮವಾಗಿ ವಾಸವಾಗಿರುವುದು ಪತ್ತೆಯಾಗಿದೆ. ಪಬ್‍ಗೆ ಬರುವ ಗ್ರಾಹಕರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT