ADVERTISEMENT

ಬೆಂಗಳೂರು | ನೇರಳೆ ಹಬ್ಬ ಮುಂದೂಡಲು ಮನವಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 0:28 IST
Last Updated 18 ಫೆಬ್ರುವರಿ 2026, 0:28 IST
ಶಾಲಿನಿ ರಜನೀಶ್ 
ಶಾಲಿನಿ ರಜನೀಶ್    

ಬೆಂಗಳೂರು: ಪರೀಕ್ಷಾ ಸಮಯದಲ್ಲಿ ಆಯೋಜಿಸಿರುವ ನೇರಳೆ ಹಬ್ಬವನ್ನು (ಪರ್ಪಲ್‌ ಫೆಸ್ಟ್‌) ಮುಂದೂಡುವಂತೆ ಕೋರಿ ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಪದಾಧಿಕಾರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಫೆ.27, 28 ಹಾಗೂ 1ರಂದು ನೇರಳೆ ಹಬ್ಬವನ್ನು ಆಯೋಜಿಸಲಾಗಿದೆ. ಪರೀಕ್ಷಾ ಸಮಯ ಆಗಿರುವ ಕಾರಣ ವಿದ್ಯಾರ್ಥಿಗಳು ಪಾಲ್ಗೊಳ್ಳಲು
ಸಾಧ್ಯವಾಗುವುದಿಲ್ಲ. ಹಬ್ಬದ ಉದ್ದೇಶವೂ ಈಡೇರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶೈಕ್ಷಣಿಕ, ಆರ್ಥಿಕ ಹಾಗೂ ವೈದ್ಯಕೀಯ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಹಬ್ಬವನ್ನು ಆಯೋಜಿಸಲಾಗಿದೆ. ನಿಗದಿಯಂತೆ ಹಬ್ಬ ನಡೆದರೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಂಗವಿಕಲ ಮಕ್ಕಳು ಹಾಗೂ ಅವರ ಪೋಷಕರಿಗೆ ಆ ಹಬ್ಬದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. ಪರೀಕ್ಷಾ ಕಾಲ ಮುಗಿದ ಮೇಲೆ ಅಂದರೆ ಏಪ್ರಿಲ್‌– ಮೇ ತಿಂಗಳಲ್ಲಿ ನೇರಳೆ ಹಬ್ಬವನ್ನು ಆಯೋಜಿಸಬೇಕು ಎಂದು ಕಾರ್ಯಾಧ್ಯಕ್ಷ ಚಂದ್ರಶೇಖರ್ ಪುಟ್ಟಪ್ಪ ಕೋರಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.