ಬೆಂಗಳೂರು: ರೈಲಿನಲ್ಲಿ ಮಾದಕ ವಸ್ತು ಹ್ಯಾಶಿಶ್ ಆಯಿಲ್ ಸಾಗಣೆ ಮಾಡಿಕೊಂಡು ಬಂದಿದ್ದ ಇಬ್ಬರು ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ವಿಜಯನಗರದ ಅಪ್ಪಲರಾಜು(34) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಬಂಧಿಸಲಾಗಿದೆ. ಆರೋಪಿಗಳಿಂದ ₹70 ಲಕ್ಷ ಮೌಲ್ಯದ ಹ್ಯಾಶಿಶ್ ಆಯಿಲ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದರು.
ಆಂಧ್ರಪ್ರದೇಶದ ವಿಜಯನಗರದ ತಂಗಾಟಿ ಭರತ್ ಎಂಬಾತನಿಂದ ಹ್ಯಾಶಿಶ್ ಆಯಿಲ್ ಅನ್ನು ಕಡಿಮೆ ಬೆಲೆಗೆ ಖರೀದಿಸಿ ಪ್ರಶಾಂತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಣೆ ಮಾಡಿಕೊಂಡು ನಗರಕ್ಕೆ ತಂದಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ, ಯಲಹಂಕ ರೈಲು ನಿಲ್ದಾಣದಲ್ಲಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.