ADVERTISEMENT

ಬೆಂಗಳೂರು: ರೈಲು ಗಾಲಿ ಕಾರ್ಖಾನೆ, ರೈಲ್ವೆಯಲ್ಲಿ ಸ್ವಾತಂತ್ರ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2025, 16:18 IST
Last Updated 15 ಆಗಸ್ಟ್ 2025, 16:18 IST
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಧ್ವಜಾರೋಹಣ ನೆರವೇರಿಸಿ, ಮಹಾತ್ಮ ಗಾಂಧೀಜಿ, ಬಿ.ಆರ್‌. ಅಂಬೇಡ್ಕರ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರಗಳಿಗೆ ನಮನ ಸಲ್ಲಿಸಿದರು. ನಿರ್ದೇಶಕಿ (ಸಿಬ್ಬಂದಿ ಮತ್ತು ಜಾಗೃತ) ನಂದಿನಿದೇವಿ ಕೆ‌., ನಿರ್ದೇಶಕ (ಮಾಹಿತಿ ಮತ್ತು ತಂತ್ರಜ್ಞಾನ) ಇಬ್ರಾಹಿಂ ಮೈಗೂರ, ನೌಕರರು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಧ್ವಜಾರೋಹಣ ನೆರವೇರಿಸಿ, ಮಹಾತ್ಮ ಗಾಂಧೀಜಿ, ಬಿ.ಆರ್‌. ಅಂಬೇಡ್ಕರ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರಗಳಿಗೆ ನಮನ ಸಲ್ಲಿಸಿದರು. ನಿರ್ದೇಶಕಿ (ಸಿಬ್ಬಂದಿ ಮತ್ತು ಜಾಗೃತ) ನಂದಿನಿದೇವಿ ಕೆ‌., ನಿರ್ದೇಶಕ (ಮಾಹಿತಿ ಮತ್ತು ತಂತ್ರಜ್ಞಾನ) ಇಬ್ರಾಹಿಂ ಮೈಗೂರ, ನೌಕರರು ಉಪಸ್ಥಿತರಿದ್ದರು.   

ಬೆಂಗಳೂರು: ಬೆಂಗಳೂರು ರೈಲ್ವೆ ವಿಭಾಗ, ರೈಲು ಗಾಲಿ ಕಾರ್ಖಾನೆಗಳಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ರೈಲು ಗಾಲಿ ಕಾರ್ಖಾನೆ: ಯಲಹಂಕದಲ್ಲಿರುವ ರೈಲು ಗಾಲಿ ಕಾರ್ಖಾನೆಯಲ್ಲಿ ಕಾರ್ಖಾನೆಯ ಪ್ರಧಾನ ಪ್ರಬಂಧಕ ಚಂದ್ರವೀರ್ ರಮಣ ಧ್ವಜಾರೋಹಣ ಮಾಡಿದರು.

ರೈಲ್ವೆ ರಕ್ಷಣಾ ದಳ, ಎನ್‌ಸಿಸಿ ಬಾಲಕರು ಮತ್ತು ಬಾಲಕಿಯರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಪಥಸಂಚಲ ನಡೆಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ರೈಲು ಗಾಲಿ ಕಾರ್ಖಾನೆಯ ಮಹಿಳಾ ಕಲ್ಯಾಣ ಸಂಸ್ಥೆಯ ಶಿವಾನಿ ಸಿಂಗ್‌ ಮತ್ತು ಇತರ ಪದಾಧಿಕಾರಿಗಳು ರೈಲ್ವೆ ಆಸ್ಪತ್ರೆಗೆ ಭೇಟಿ ನೀಡಿ, ಹಣ್ಣುಗಳನ್ನು ಹಂಚಿದರು.

ADVERTISEMENT

ರೈಲ್ವೆ ವಿಭಾಗ: ನೈರುತ್ಯ ರೈಲ್ವೆ ಬೆಂಗಳೂರು ವಿಭಾಗೀಯ ವ್ಯವಸ್ಥಾಪಕ ಆಶುತೋಷ್ ಕುಮಾರ್ ಸಿಂಗ್ ಧ್ವಜಾರೋಹಣ ನೆರವೇರಿಸಿದರು. 

ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕರಾದ ಪರೀಕ್ಷಿತ್ ಮೋಹನ್ ಪುರಿಯಾ, ಪ್ರವೀಣ್ ಕಾತರಕಿ, ಹಿರಿಯ ವಿಭಾಗೀಯ ಭದ್ರತಾ ಆಯುಕ್ತ ಶ್ರೇಯಾನ್ಸ್ ಚಿಂಚ್ವಾಡೆ, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ಉಮಾ ಶರ್ಮಾ, ನೈರುತ್ಯ ರೈಲ್ವೆ ಮಹಿಳಾ ಕ್ಷೇಮಾಭಿವೃದ್ಧಿ ಸಂಘಟನೆಯ ಬೆಂಗಳೂರು ವಿಭಾಗದ ಅಧ್ಯಕ್ಷೆ ರೀನಾ ಸಿಂಗ್ ಉಪಸ್ಥಿತರಿದ್ದರು.

ನೀರು ಶುದ್ಧೀಕರಣ ಯಂತ್ರ: 
ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರು ವಿಭಾಗದ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಘಟನೆಯು ವಿಭಾಗೀಯ ರೈಲ್ವೆ ಆಸ್ಪತ್ರೆಗೆ ನೀರು ಶುದ್ಧೀಕರಣದ ಎರಡು ಯಂತ್ರಗಳನ್ನು ನೀಡಿತು. ರೈಲ್ವೆ ಮಹಿಳಾ ಕಲ್ಯಾಣ ಸಂಘಟನೆಯ ಅಧ್ಯಕ್ಷೆ ರೀನಾ ಸಿಂಗ್, ಕಾರ್ಯದರ್ಶಿ ನಿಧಿ ಶರ್ಮಾ, ಖಜಾಂಚಿ ಭಾಗ್ಯಶ್ರೀ, ಮುಖ್ಯ ವೈದ್ಯಕೀಯ ಅಧೀಕ್ಷಕಿ ಪ್ರಭಾವತಿ ಗಜಲಕ್ಷ್ಮಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.