ADVERTISEMENT

ಬೆಂಗಳೂರು | ಧಾರಾಕಾರ ಮಳೆಗೆ ಕುಸಿದ ಮಣ್ಣು: ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2025, 17:38 IST
Last Updated 1 ಸೆಪ್ಟೆಂಬರ್ 2025, 17:38 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಯಲಹಂಕದಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಥಳದಲ್ಲಿ ಮಣ್ಣು ಕುಸಿದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಯಲಹಂಕದಲ್ಲಿ ಎಂಬೆಸ್ಸಿ ಗ್ರೂಪ್ ಸಂಸ್ಥೆಯ ಕಟ್ಟಡ ನಿರ್ಮಾಣವಾಗುತ್ತಿದ್ದು, ಕಾರ್ಮಿಕರು ಕಟ್ಟಡದ ಅಡಿಪಾಯಕ್ಕೆ ಗುಂಡಿ ಅಗೆಯುತ್ತಿದ್ದರು. ಈ ವೇಳೆ ಧಾರಾಕಾರ ಮಳೆ ಸುರಿದಿದ್ದರಿಂದ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡು ಮಣ್ಣು ಕುಸಿದಿದೆ. ಕೆಲವರು ಮೇಲೆ ಬಂದು ಪಾರಾದರು. ಇಬ್ಬರು ಮಣ್ಣಿನ ಅಡಿ ಸಿಲುಕಿದ್ದರು. ನಂತರ ಇತರೆ ಕಾರ್ಮಿಕರು, ಸ್ಥಳೀಯರ ನೆರವಿನಿಂದ ಮಣ್ಣು ತೆರವುಗೊಳಿಸಲು ಯತ್ನಿಸಿದ್ದರು. ಆದರೆ, ಆ ವೇಳೆಗಾಗಲೇ ಆಂಧ್ರಪ್ರದೇಶದ ಒಬ್ಬ ಕಾರ್ಮಿಕ ಮಣ್ಣಿನ ಅಡಿಯೇ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.

ADVERTISEMENT

ಮಣ್ಣಿನಡಿ ಸಿಲುಕಿದ್ದ ಮತ್ತೊಬ್ಬ ಕಾರ್ಮಿಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು. ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.