ADVERTISEMENT

ನಗರದ ಕೆಲವೆಡೆ ಜೋರು ಮಳೆ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 23:11 IST
Last Updated 13 ನವೆಂಬರ್ 2020, 23:11 IST
ಜಯನಗರದಲ್ಲಿ ಶುಕ್ರವಾರ ಸುರಿದ ಮಳೆಯಲ್ಲಿ ಯುವತಿಯರು ಕೊಡೆ ಹಿಡಿದುಕೊಂಡು ಹೆಜ್ಜೆ ಹಾಕಿದರು – ಪ್ರಜಾವಾಣಿ ಚಿತ್ರ
ಜಯನಗರದಲ್ಲಿ ಶುಕ್ರವಾರ ಸುರಿದ ಮಳೆಯಲ್ಲಿ ಯುವತಿಯರು ಕೊಡೆ ಹಿಡಿದುಕೊಂಡು ಹೆಜ್ಜೆ ಹಾಕಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ನಗರದ ಕೆಲವೆಡೆ ಶುಕ್ರವಾರ ರಾತ್ರಿ ಜೋರು ಮಳೆಯಾಗಿದ್ದು, ಹಲವೆಡೆ ಜಿಟಿ ಜಿಟಿ ಮಳೆ ಸುರಿದಿದೆ.

ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬಂತು. ಅಲ್ಲಲ್ಲಿ ಜಿಟಿ ಜಿಟಿಯಾಗಿ ಮಳೆಯೂ ಸುರಿಯಿತು. ಸಂಜೆ ವೇಳೆ ಕೆಲವೆಡೆ ಮಳೆ ಅಬ್ಬರ ಜೋರಾಗಿತ್ತು.

ಮಲ್ಲೇಶ್ವರ, ಸದಾಶಿವನಗರ, ಸುಬ್ರಹ್ಮಣ್ಯನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಿತ್ತು. ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ರಾಜರಾಜೇಶ್ವರಿನಗರ, ಯಶವಂತಪುರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಇತ್ತು.

ADVERTISEMENT

‘ಕೆಲವೆಡೆ ಮಾತ್ರ ಮಳೆಯಾಗಿದ್ದು, ರಸ್ತೆಯಲ್ಲಿ ನೀರು ನಿಂತಿತ್ತು. ಮಳೆ ನಿಂತ ನಂತರ ನೀರು ಖಾಲಿಯಾಗಿದೆ.
ಮರ ಬಿದ್ದ ಹಾಗೂ ಮಳೆಯಿಂದ ಹಾನಿಯಾದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.