ಕೆ.ಆರ್.ಪುರ: ಬೆನ್ನಿಗಾನಹಳ್ಳಿ ಸೇತುವೆ ಬಳಿ ಕೆಎಸ್ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ತಮ್ಮನಾಯಕನಹಳ್ಳಿ ನಿವಾಸಿ ಮನೋಜ್ (29) ಮೃತ ಯುವಕ.
ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆ.ಆರ್.ಪುರದಲ್ಲಿ ವಾಸವಾಗಿದ್ದರು. ಬುಧವಾರ ರಾತ್ರಿ 10.45 ಸುಮಾರಿಗೆ ಮಳೆ ಸುರಿಯುತ್ತಿದ್ದಾಗಲೇ ದ್ವಿಚಕ್ರ ವಾಹನದಲ್ಲಿ ನಗರದ ಕಡೆಯಿಂದ ಕಸ್ತೂರಿನಗರ ಕಡೆಗೆ ಬರುತ್ತಿರುವಾಗ ಅಪಘಾತ ನಡೆದಿದೆ.
ಕೆಜಿಎಫ್ ಡಿಪೊಗೆ ಸೇರಿದ ಕೆಎಸ್ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಆಯತಪ್ಪಿ ಕೆಳಗೆ ಬಿದ್ದಿದ್ದರು. ಕೆಳಗೆ ಬಿದ್ದ ಸವಾರನ ಮೇಲೆ ಬಸ್ ಚಕ್ರ ಹರಿದು ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಕೆ.ಆರ್.ಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.
ಕೆ.ಆರ್.ಪುರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ಕಾರಣವಾದ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.