ADVERTISEMENT

ಬೆಂಗಳೂರು | ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 16:08 IST
Last Updated 11 ಅಕ್ಟೋಬರ್ 2025, 16:08 IST
   

ಬೆಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಅಶೋಕನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಡುಗೋಡಿ ನಿವಾಸಿ ಭಾಗ್ಯವತಿ(50) ಮೃತ ಮಹಿಳೆ.

ರಿಚ್ಮಂಡ್‌ ವೃತ್ತದ ಬಳಿಯ ಲಾಗ್‌ಫೋರ್ಡ್‌ ಗಾರ್ಡನ್ ರಸ್ತೆಯಲ್ಲಿ ಶುಕ್ರವಾರ ಸಂಜೆ ದುರ್ಘಟನೆ ನಡೆದಿದೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ನಗರದ ನಂಜಪ್ಪ ವೃತ್ತದ ಬಳಿ ಇರುವ ಸಹೋದರಿ ನೋಡಲು ರಿಚ್ಮಂಡ್‌ ಸರ್ಕಲ್‌ ಬಳಿ ಬಂದು ಬಸ್‌ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದರು. ಆಗ ವೇಗವಾಗಿ ಬಂದ ಕಾರೊಂದು ಭಾಗ್ಯವತಿ ಅವರಿಗೆ ಡಿಕ್ಕಿ ಹೊಡೆದು, ಕಾರಿನ ಚಕ್ರಗಳು ಮಹಿಳೆ ಮೇಲೆ ಹರಿದಿದೆ. ಪರಿಣಾಮ ತೀವ್ರ ರಕ್ತಸ್ರಾವ ಉಂಟಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಅಶೋಕನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.