ADVERTISEMENT

ಬೆಂಗಳೂರು | ರಸ್ತೆ ರಂಪಾಟ ಪ್ರಕರಣ: ‘ಮೆಂಟಲ್’ ಪ್ರಸಾದ್ ಸೇರಿ ಇಬ್ಬರ ಸೆರೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2025, 15:24 IST
Last Updated 2 ಡಿಸೆಂಬರ್ 2025, 15:24 IST
ಪ್ರಸಾದ್
ಪ್ರಸಾದ್   

ಬೆಂಗಳೂರು: ರಸ್ತೆ ರಂಪಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸೇರಿ ಇಬ್ಬರನ್ನು ವಿದ್ಯಾರಣ್ಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್ ಪ್ರಸಾದ್ ಅಲಿಯಾಸ್ ‘ಮೆಂಟಲ್’ ಪ್ರಸಾದ್ ಹಾಗೂ ಮಧುಸೂದನ್ ಬಂಧಿತರು.

ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಚಾಲಕನ ಕೊಲೆಗೆ ಯತ್ನಿಸಿದ್ದ ಆರೋಪದ ಅಡಿ ಇಬ್ಬರನ್ನು ಬಂಧಿಸಲಾಗಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ನವೆಂಬರ್‌ 21ರಂದು ರಾತ್ರಿ 10.45ರ ಸುಮಾರಿಗೆ ಶಾಜುಮೋನ್ ಎಂಬುವವರು ಕಾರಿನಲ್ಲಿ ತೆರಳುತ್ತಿದ್ದರು. ದ್ವಿಚಕ್ರ ವಾಹನಕ್ಕೆ ಕಾರು ತಾಗಿತ್ತು. ಶಾಜುಮೋನ್ ಹಾಗೂ ದ್ವಿಚಕ್ರ ವಾಹನ ಸವಾರ ರಸ್ತೆಯಲ್ಲಿ ನಿಂತು ಗಲಾಟೆ ಮಾಡಿಕೊಳ್ಳುತ್ತಿದ್ದರು. ಅದೇ ಸಂದರ್ಭದಲ್ಲಿ ರಸ್ತೆಬದಿಯಲ್ಲಿ ನಿಂತಿದ್ದ ರೌಡಿಶೀಟರ್ ಪ್ರಸಾದ್ ಹಾಗೂ ಮಧುಸೂದನ್ ಏಕಾಏಕಿ ಕಲ್ಲು ತಂದು ಕಾರಿನ ಮೇಲೆ ಎತ್ತಿಹಾಕಿದ್ದರು. ನಂತರ, ಚಾಲಕನ ಮೇಲೆ ಹಲ್ಲೆ ಮಾಡಿದ್ದರು. ಈ ಗಲಾಟೆಯನ್ನು ಗಮನಿಸಿದ್ದ ದ್ವಿಚಕ್ರ ವಾಹನ ಸವಾರ ಸ್ಥಳದಿಂದ ತೆರಳಿದ್ದರು. ಈ ವೇಳೆ ಪೊಲೀಸರಿಗೆ ಕರೆ ಮಾಡಲು ಮುಂದಾಗಿದ್ದ ವಿನೋದ್ ರಾವಲ್ ಅವರ ಮೇಲೂ ಆರೋಪಿಗಳು ಹಲ್ಲೆ ನಡೆಸಿ ಅಲ್ಲಿಂದ ಪರಾರಿ ಆಗಿದ್ದರು’ ಎಂದು ಪೊಲೀಸರು ಹೇಳಿದರು.

ಕೊಲೆ, ಕೊಲೆ ಯತ್ನ, ದರೋಡೆ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ‘ಮೆಂಟಲ್’ ಪ್ರಸಾದ್ ಭಾಗಿಯಾಗಿ ಜೈಲಿಗೆ ಹೋಗಿದ್ದ. ಕಳೆದ ತಿಂಗಳು ಜೈಲಿನಿಂದ ಬಿಡುಗಡೆ ಆಗಿದ್ದ. ಇದೀಗ ಕೊಲೆ ಯತ್ನ ಪ್ರಕರಣದಲ್ಲಿ ಮತ್ತೆ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮಧುಸೂದನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.