ಬೆಂಗಳೂರು: ಭಾರತೀಯ ವಿದ್ಯಾರ್ಥಿಗಳಿಗೆ ಜಪಾನ್‌ನಲ್ಲಿ ತರಬೇತಿ ಮತ್ತು ಉದ್ಯೋಗ ಅವಕಾಶ ಒದಗಿಸುವ ಸಂಬಂಧ ಆರ್.ವಿ ವಿಶ್ವವಿದ್ಯಾಲಯ ಮತ್ತು ಜಪಾನ್‌ನ ಇಬರಾಕಿ ಪ್ರಿಫೆಕ್ಚರ್ ಪ್ರಾಂತ್ಯದ ಸರ್ಕಾರವು ಒಪ್ಪಂದ ಮಾಡಿಕೊಂಡಿವೆ.
ನಗರದ ಆರ್.ವಿ. ವಿಶ್ವವಿದ್ಯಾಲಯದಲ್ಲಿ, ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಆರ್.ವಿ ವಿಶ್ವವಿದ್ಯಾಲಯದಲ್ಲಿ ಜಪಾನಿ ಭಾಷಾ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಗಿದೆ. ಭಾರತದಲ್ಲಿನ ಜಪಾನ್ ರಾಯಭಾರ ಕಚೇರಿಯ ಸಹಯೋಗದಲ್ಲಿ ಈ ಕೋರ್ಸ್ ನಡೆಸಲಾಗುತ್ತಿದೆ. ಈ ಕೋರ್ಸ್ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಜಪಾನ್‌ನಲ್ಲಿ ತರಬೇತಿ ಮತ್ತು ಉದ್ಯೋಗ ಅವಕಾಶ ಒದಗಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ.
ಟೊಕಿಯೊ ಹೊರವಲಯದಲ್ಲಿರುವ ಇಬರಾಕಿ ಪ್ರಾಂತ್ಯದಲ್ಲಿ ಕೈಗಾರಿಕೆಗಳು ಮತ್ತು ಕೃಷಿ ಉತ್ಪನ್ನ ಆಧಾರಿತ ಉದ್ಯಮಗಳು ಹೇರಳವಾಗಿವೆ. ಆದರೆ ಅಲ್ಲಿ ಮಾನವ ಸಂಪನ್ಮೂಲ ಕೊರತೆ ಇದೆ. ಈ ಒಪ್ಪಂದವು ಆ ಕೊರತೆಯನ್ನು ನಿವಾರಿಸಲು ನೆರವಾಗಲಿದೆ ಎಂದು ಜಪಾನಿನ ರಾಯಭಾರ ಕಚೇರಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.