ADVERTISEMENT

ಬೆಂಗಳೂರು: ಭದ್ರತಾ ಸಿಬ್ಬಂದಿ ಮೇಲೆ ಹರಿದ ಲಾರಿ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2025, 14:31 IST
Last Updated 24 ಆಗಸ್ಟ್ 2025, 14:31 IST
   

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಖಾಸಗಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದ ಸಂಜೀವ್ ಕುಮಾರ್ (22) ಮೃತ ವ್ಯಕ್ತಿ.

ಬಿಹಾರ ಮೂಲದ ಸಂಜೀವ್ ಪೀಣ್ಯದಲ್ಲಿ ವಾಸವಾಗಿದ್ದರು. ರಾತ್ರಿ ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಕೃಷ್ಣಾನಂದ ನಗರದ ಜಂಕ್ಷನ್‌ ಬಳಿ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ವಾಹನದಿಂದ ಕೆಳಗೆ ಬಿದ್ದ ಸಂದರ್ಭದಲ್ಲಿ ಲಾರಿ ಚಕ್ರ ಅವರ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಚಾಲನೆ ಮಾಡುತ್ತಿದ್ದ ರ್‍ಯಾಪಿಡೊ ಸ್ಕೂಟರ್‌ನ ಚಾಲಕ ಸಹ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.