ಸಾವು
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಡಾವಣೆಯೊಂದರಲ್ಲಿ ನೆಲಸಿದ್ದ ಸೆಕ್ಯೂರಿಟಿ ಗಾರ್ಡ್ ಅಂಬರೀಷ್ ತಾಪ (18) ಎಂಬುವರು ನೇಣುಹಾಕಿಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನೇಪಾಳದ ಅಂಬರೀಷ್ ತಾಪ ಅವರು ಕೆಲವು ತಿಂಗಳ ಹಿಂದೆ ನಗರಕ್ಕೆ ಬಂದಿದ್ದರು. ಅಣ್ಣನ ಜತೆಗೆ ಬಾಡಿಗೆ ಮನೆಯಲ್ಲಿ ನೆಲಸಿದ್ದರು.
ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಹೊಸ ಮೊಬೈಲ್ ತೆಗೆದುಕೊಂಡಿದ್ದರು. ಮೊಬೈಲ್ ವೀಕ್ಷಣೆಯಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದರು. ಕೆಲಸಕ್ಕೂ ಸರಿಯಾಗಿ ಹೋಗುತ್ತಿರಲಿಲ್ಲ. ಅಂಬರೀಷ್ ವರ್ತನೆಯಿಂದ ಬೇಸತ್ತಿದ್ದ ಅಣ್ಣ ಬುದ್ಧಿಮಾತು ಹೇಳಿದ್ದರು. ಅಣ್ಣ ಬೈದಿದ್ದಕ್ಕೆ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಹೇಳಿದರು.
ಅಸಹಜ ಸಾವಿನ ಪ್ರಕರಣ (ಯುಡಿಆರ್) ದಾಖಲಿಸಿಕೊಂಡು ವರ್ತೂರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.