ADVERTISEMENT

ಬೆಂಗಳೂರು ಪ್ರತ್ಯೇಕ ಅಪಘಾತ: ಸಹಾಯಕ ವ್ಯವಸ್ಥಾಪಕ, ಲಾರಿ ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 16:07 IST
Last Updated 2 ಮಾರ್ಚ್ 2026, 16:07 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ಬೆಂಗಳೂರು: ಮಾದನಾಯಕನಹಳ್ಳಿ ಹಾಗೂ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಖಾಸಗಿ ಕಂ‍ಪನಿಯ ಸಹಾಯಕ ವ್ಯವಸ್ಥಾಪಕ ಹಾಗೂ ಲಾರಿ ಚಾಲಕ ಮೃತಪಟ್ಟಿದ್ದಾರೆ.

ADVERTISEMENT

ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಳಾರಿ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಕಂಪನಿಯೊಂದರ ಸಹಾಯಕ ವ್ಯವಸ್ಥಾಪಕ, ಉತ್ತರ ಪ್ರದೇಶದ ಆರ್ಯನ್‌ ಸಿನ್ಹಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆರ್ಯನ್‌ ಸಿನ್ಹಾ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಂಪ್ಸ್ ಗಮನಿಸದೇ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ಬಿಟಿಎಂ ಲೇಔಟ್‌ನಲ್ಲಿ ನೆಲಸಿದ್ದರು. ಮಡಿವಾಳದ ಖಾಸಗಿ ಕಂಪನಿಯೊಂದರಲ್ಲಿ ಆರ್ಯನ್‌ ಅವರು ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ 8.30ರಲ್ಲಿ ದ್ವಿಚಕ್ರ ವಾಹನದಲ್ಲಿ ಬೆಂಗಳೂರು–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಮೂಲಕ ಚಿಕ್ಕಬಳ್ಳಾಪುರದ ಕಡೆಗೆ ತೆರಳುತ್ತಿದ್ದರು. ಕೋಟೆ ಕ್ರಾಸ್‌ ಬಳಿ ಅಪಘಾತ ಸಂಭವಿಸಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು ರಸ್ತೆಯ ಅಗರ್‌ವಾಲ್‌ ಹೋಟೆಲ್‌ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ. ವಿಜಯಪುರದ ಇಸ್ಮಾಯಿಲ್‌ (54)ಮೃತಪಟ್ಟವರು. ಇಸ್ಮಾಯಿಲ್ ಅವರು ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಇಸ್ಮಾಯಿಲ್ ಅವರು ಮೂರು ದಿನಗಳ ಹಿಂದಷ್ಟೇ ನಗರಕ್ಕೆ ಬಂದಿದ್ದರು. ಭಾನುವಾರ ರಾತ್ರಿ 10 ಗಂಟೆಯ ಸುಮಾರಿಗೆ ಹೆದ್ದಾರಿ ದಾಟುವಾಗ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲು ಕರೆದೊಯ್ಯಲಾಗುತ್ತಿತ್ತು. ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.