ವಿದ್ಯುತ್ ಪ್ರವಹಿಸಿ ಸಾವು
ಬೆಂಗಳೂರು: ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ನ ಫ್ಲ್ಯಾಟ್‌ನಲ್ಲಿ ಬುಧವಾರ ರಾತ್ರಿ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡು ಮಗು ಮೃತಪಟ್ಟಿದೆ.
ನೇಪಾಳ ಮೂಲದ ಪುಷ್ಕರ್ ಕುಮಾರ್– ಜ್ಯೋತಿಕುಮಾರಿ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ಮಗು.
ಎಂಟು ವರ್ಷಗಳ ಹಿಂದೆ ನಗರಕ್ಕೆ ದಂಪತಿ ಬಂದಿದ್ದರು. ಕೆಲಸದ ನಿಮಿತ್ತ ದಂಪತಿ ಹೊರಕ್ಕೆ ಹೋಗಿದ್ದರು. ಆಗ ಅವಘಡ ಸಂಭವಿಸಿದೆ ಎಂದು ಪೊಲೀಸರು ಹೇಳಿದರು.
ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದಲೇ ಬೆಂಕಿ ಹೊತ್ತಿಕೊಂಡಿರುವಂತೆ ಕಂಡುಬಂದಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.