ಅಪಘಾತ
–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪ್ರಕರಣ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ವಿಶಾಲ್ ಕೌರ್ (25) ಮೃತಪಟ್ಟವರು.
ಗೊಲ್ಲಹಳ್ಳಿಯಲ್ಲಿ ವಾಸವಾಗಿದ್ದ ವಿಶಾಲ್ ಕೌರ್ ಅವರು ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದರು. ವಿಶಾಲ್ ಅವರು ಸ್ನೇಹಿತನ ಜತೆ ಹೋಟೆಲ್‌ನಲ್ಲಿ ಊಟ ಮಾಡಿಕೊಂಡು ವಾಪಸ್ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಭಾನುವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿಯ 2ನೇ ಮುಖ್ಯರಸ್ತೆಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಆಗ ಉರುಳಿ ಬಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡರು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವಿಶಾಲ್ ಕೌರ್ ಮೃತಪಟ್ಟರು, ಹಿಂಬದಿ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆ ವೇಳೆ ಕಂಡು ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.