
ಬಂಧನ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಎಸ್.ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ಓಂಶಕ್ತಿ ಗಾರ್ಡನ್‌ನಲ್ಲಿ ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲೆಸೆತ ಪ್ರಕರಣದಲ್ಲಿ ಮೂವರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ರಾತ್ರಿಯೇ ಮೂವರನ್ನು ವಶಕ್ಕೆ ಪಡೆದು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ತಿಳಿಸಿದ್ದಾರೆ.
ಕೃತ್ಯ ನಡೆದ ಬಳಿಕ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಜೆಜೆ ನಗರ ಠಾಣೆಯ ಎದುರು ಮಾಲಾಧಾರಿಗಳು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.
ಪ್ರಕರಣದ ಸಂಬಂಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.