ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ಬೆಂಗಳೂರು: ನಗರದ ಸುಂಕದಕಟ್ಟೆಯ ಹೊಯ್ಸಳ ನಗರದ ಪೈಪ್‌ಲೈನ್ ರಸ್ತೆಯ ಸೇಂಟ್ ಮೇರೀಸ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗೆ ಪಿವಿಸಿ ಪೈಪ್‌ನಿಂದ ರಕ್ತ ಹೆಪ್ಪುಗಟ್ಟುವಂತೆ ಥಳಿಸಿದ್ದ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ತಿಳಿಸಿದೆ.
ಅಲ್ಲದೆ ಶಾಲೆಗೆ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿ, ಇಲಾಖಾ ನಿಯಮಾನುಸಾರ ಕ್ರಮ ಕೈಗೊಂಡು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ, ಕೈಗೊಂಡ ಕ್ರಮದ ವರದಿಯನ್ನು 7 ದಿನಗಳ ಒಳಗಾಗಿ ಸಲ್ಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಗೆ ಆಯೋಗವು ನಿರ್ದೇಶಿಸಿದೆ.
ಸಂತ್ರಸ್ತ ಬಾಲಕನ ಮನೆಗೆ ಭೇಟಿ ನೀಡಿ ಆಪ್ತ ಸಮಾಲೋಚನೆ ನಡೆಸಿ, ಘಟನೆ ಸಂಬಂಧಿದಂತೆ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿ ನೀಡಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಹಾಗೂ ಘಟನೆ ಸಂಬಂಧ ದಾಖಲಾಗಿರುವ ಎಫ್ಐಆರ್ ಬಗ್ಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.