ಪ್ರಾತಿನಿಧಿಕ ಚಿತ್ರ
ಬೆಂಗಳೂರು: ನಗರದ ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜಿನ 40ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ.
ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳು ಎಂಬ ವಿಷಯಕ್ಕೆ ಜಗಳ ನಡೆದಿದ್ದು, ಕಾಲೇಜು ಮುಂಭಾಗ ಪರಸ್ಪರ ಕೈ ಕೈ ಮಿಲಾಯಿಸಿರುವ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊ ಜಾಲತಾಣದಲ್ಲಿ ಹರಿದಾಡುತ್ತಿದೆ.
‘ಕೇರಳದ ವಿವಿಧ ಭಾಗಗಳಿಂದ ಬಂದಿರುವ ವಿದ್ಯಾರ್ಥಿಗಳು ಇಲ್ಲಿ ನರ್ಸಿಂಗ್ ಓದುತ್ತಿದ್ದಾರೆ. ಹಿರಿಯ ವಿದ್ಯಾರ್ಥಿಗಳ ಮಾತನ್ನು ಕಿರಿಯರ ವಿದ್ಯಾರ್ಥಿಗಳು ಕೇಳಬೇಕು ಎನ್ನುವ ವಿಚಾರಕ್ಕೆ ಗಲಾಟೆ ನಡೆದಿದೆ. ವಿದ್ಯಾರ್ಥಿಗಳಿಂದ ತಪ್ಪೊಪ್ಪಿಗೆ ಬರೆಸಿಕೊಂಡು ಎಚ್ಚರಿಕೆ ನೀಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಎಂಟು ವಿದ್ಯಾರ್ಥಿಗಳನ್ನು ಹೊರಗೆ ಹಾಕಿದೆ. ಪ್ರಕರಣ ದಾಖಲಾಗಿಲ್ಲ’ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.