ADVERTISEMENT

ಬೆಂಗಳೂರು | ನಗರದಲ್ಲಿ ಗರಿಷ್ಠ ಮಟ್ಟಕ್ಕೆ ತಲುಪಿದ ಉಷ್ಣಾಂಶ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 15:59 IST
Last Updated 3 ಏಪ್ರಿಲ್ 2024, 15:59 IST
ಉಷ್ಣಾಂಶ ಹೆಚ್ಚಳ– ಸಾಂಕೇತಿಕ ಚಿತ್ರ
ಉಷ್ಣಾಂಶ ಹೆಚ್ಚಳ– ಸಾಂಕೇತಿಕ ಚಿತ್ರ   

ಬೆಂಗಳೂರು: ನಗರದ ವಾತಾವರಣದಲ್ಲಿ ಉಷ್ಣಾಂಶ ಗರಿಷ್ಠ ಮಟ್ಟಕ್ಕೆ ತಲಿಪಿದ್ದು, ಮುಂದಿನ ಐದು ದಿನಗಳು ಗರಿಷ್ಠ ಉಷ್ಣಾಂಶ 36ರಿಂದ 37 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬುಧವಾರ ಮಧ್ಯಾಹ್ನ 1 ಗಂಟೆಗೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಗರಿಷ್ಠ ಉಷ್ಣಾಂಶ 37.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 24.5 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.  

ಮುಂದಿನ ಐದು ದಿನಗಳು ಬೆಳಿಗ್ಗೆ ಮೋಡ ಕವಿದ ವಾತಾವರಣ ಇರುತ್ತದೆ. ಮಧ್ಯಾಹ್ನ ಹಾಗೂ ಸಂಜೆಯ ಹೊತ್ತಿಗೆ ಆಕಾಶ ನಿರ್ಮಲವಾಗಿ ಇರಲಿದ್ದು, ತಾಪಮಾನ ಹೆಚ್ಚಳವಾಗಲಿದೆ ಎಂದು ಇಲಾಖೆ ತಿಳಿಸಿದೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.