ADVERTISEMENT

ಬೆಂಗಳೂರು: ಶಾಲಾ ಬಸ್‌ನ ಚಕ್ರ ಹರಿದು ಇಬ್ಬರು ಮಕ್ಕಳ ಸಾವು

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 12:52 IST
Last Updated 11 ಫೆಬ್ರುವರಿ 2026, 12:52 IST
   

ಬೆಂಗಳೂರು: ಹೆಣ್ಣೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ಶಾಲಾ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ವರ್ಷಾ(2) ಹಾಗೂ ಭಾನು(4) ಮೃತ ಮಕ್ಕಳು.

ಉತ್ತರ ಸಂಚಾರ ವಿಭಾಗದ ಡಿಸಿಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಯಾದಗಿರಿಯ ನಾಗನಗೌಡ ಅವರು ಸಿಎಆರ್​ನಲ್ಲಿ ಕಾನ್‌ಸ್ಟೆಬಲ್‌ ಆಗಿ ನಗರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ತಮ್ಮ ಪುತ್ರಿ ವರ್ಷಾ ಮತ್ತು ಅಣ್ಣನ ಮಗಳಾದ ಭಾನುಳನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಹಾಲು ತರಲು ತೆರಳುತ್ತಿದ್ದರು. ಥಣಿಸಂದ್ರದ ಜಂಕ್ಷನ್‌ನಲ್ಲಿ ಶಾಲಾ ಬಸ್‌ ಬರುತ್ತಿರುವುದನ್ನು ಗಮನಿಸಿ, ದ್ವಿಚಕ್ರ ವಾಹನ ನಿಲುಗಡೆ ಮಾಡಿದ್ದರು. ಯು–ಟರ್ನ್‌ ತೆಗೆದುಕೊಳ್ಳುವ ವೇಳೆ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಮಕ್ಕಳು ರಸ್ತೆಗೆ ಬಿದ್ದಿದ್ದಾರೆ. ಅವರ ಮೇಲೆಯೇ ಶಾಲಾ ಬಸ್‌ನ ಚಕ್ರ ಹರಿದು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.