ADVERTISEMENT

ಬೆಂಗಳೂರು: ಆ್ಯಂಬುಲೆನ್ಸ್‌ಗೆ ದಾರಿ ಬಿಡದ ಆಟೊ ಚಾಲಕ– ಮುಂದೆ ಆಗಿದ್ದೇನು? Video

ಬೆಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರಳೂರು ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಜನವರಿ 2025, 13:48 IST
Last Updated 24 ಜನವರಿ 2025, 13:48 IST
   

ಬೆಂಗಳೂರು: ರೋಗಿಯನ್ನು ಕರೆದುಕೊಂಡು ತೆರಳುತ್ತಿದ್ದ ಆ್ಯಂಬುಲೆನ್ಸ್‌ಗೆ ದಾರಿ ಬಿಡದಿದ್ದಕ್ಕೆ ಆಟೊ ಚಾಲಕನ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರಳೂರು ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ.

ಪ್ರಕರಣ ಸಂಬಂದ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬೆಳಂದೂರು ಠಾಣೆ ಪೊಲೀಸರು ಆಟೊ ಚಾಲಕನನ್ನು ಬಂಧಿಸಿ ಬಿಡುಗಡೆ ಮಾಡಿದ್ದಾರೆ. ದಂಡ ವಸೂಲಿ ಮಾಡಿ ಆತನ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಈ ಕುರಿತು ಬೆಂಗಳೂರು ಸಂಚಾರ ಪೊಲೀಸ್ ಎಕ್ಸ್ ತಾಣದಲ್ಲಿ ವಿಡಿಯೊ ಹಂಚಿಕೊಂಡು ಜಾಗೃತಿ ಮೂಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.