ADVERTISEMENT

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2024, 4:44 IST
Last Updated 20 ಮಾರ್ಚ್ 2024, 4:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಜೆಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೆಪಿ ನಗರದ ಮೂರನೇ ಹಂತದ ಆರನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಯಿ ಸುಕನ್ಯಾ (48) ಹಾಗೂ ಮಕ್ಕಳಾದ ನಿಖಿತ್ (28), ನಿಶ್ಚಿತ್ (26) ಆತ್ಮಹತ್ಯೆ ಮಾಡಿಕೊಂಡವರು. ಜೆಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ADVERTISEMENT

ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ. ಇವರು ಉಡುಪಿ ಜಿಲ್ಲೆಯವರು. ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕುಟುಂಬವು ಖಾಸಗಿ ಬ್ಯಾಂಕ್‌ನಲ್ಲಿ ಸಾಲ ಮಾಡಿಕೊಂಡಿತ್ತು‌ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.