ADVERTISEMENT

ಮೆಟ್ರೊ ಕಾಮಗಾರಿ ಅವಘಡ: ಇದುವರೆಗೆ 38 ಸಾವು -ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 1:57 IST
Last Updated 20 ಫೆಬ್ರುವರಿ 2023, 1:57 IST
   

ಬೆಂಗಳೂರು: ‘ಮೆಟ್ರೊ ನಿರ್ಮಾಣ ಕಾಮಗಾರಿ ವೇಳೆ ಸಂಭವಿಸಿದ ಅವಘಡಗಳಲ್ಲಿ ಇದುವರೆಗೆ 38 ಮಂದಿ ಮೃತಪಟ್ಟಿದ್ದು, 12 ಮಂದಿ ತೀವ್ರ ಗಾಯಗೊಂಡಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಜೆಡಿಎಸ್‌ನ ಟಿ.ಎ.ಶರವಣ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿ, ‘ಮೃತರ ಕುಟುಂಬದವರು ಹಾಗೂ ಗಾಯಗೊಂಡವರಿಗೆ ಈವರೆಗೂ ₹ 3.15 ಕೋಟಿ ಪರಿಹಾರ ವಿತರಿಸಲಾಗಿದೆ’ ಎಂದಿದ್ದಾರೆ.

‘ದುರಂತಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪ ಎಸಗಿದ್ದ ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್) ಮೂವರು ಎಂಜಿನಿಯರ್‌ಗಳನ್ನು ಅಮಾನತು ಮಾಡಲಾಗಿದೆ. ಗುತ್ತಿಗೆದಾರರಿಗೆ
₹ 1.77 ಕೋಟಿ ದಂಡ ವಿಧಿಸಲಾಗಿದೆ’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ADVERTISEMENT

‘ಕಾಮಗಾರಿ ಸ್ಥಳದಲ್ಲಿ ಅವಘಡಗಳು ನಡೆಯದಂತೆ ತಡೆಯಲು ಸುರಕ್ಷತೆ, ಆರೋಗ್ಯ ಹಾಗೂ ಪರಿಸರ ಕೈಪಿಡಿ ರೂಪಿಸಲಾಗಿದೆ. ಪ್ರತಿ ಗುತ್ತಿಗೆದಾರ, ಆ ಪ್ರಕಾರ ಕೆಲಸ ಮಾಡುವುದು ಕಡ್ಡಾಯವಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.