
ಬೆಂಗಳೂರು: ಹುಳಿಮಾವು ಬಳಿಯ ಸರಸ್ವತಿಪುರದಲ್ಲಿ ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ವಾಹನಗಳ ನಡುವೆ ಗುರುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್‍ನ ಶಾಂತಮ್ಮ (46) ಮೃತ ಮಹಿಳೆ.
ನಗರದ ಚಿಕ್ಕಬೇಗೂರಿನಲ್ಲಿ ಶಾಂತಮ್ಮ ಅವರು ನೆಲಸಿದ್ದರು. ಖಾಸಗಿ ಕಂಪನಿಯಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಅವರು ಸಹೋದ್ಯೋಗಿಯ ಜತೆಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಸರಸ್ವತಿಪುರದ ಆರ್‌ಟಿಒ ಕಚೇರಿ ರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ವಾಹನವು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಆಗ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದ ಶಾಂತಮ್ಮ ಅವರ ಮೇಲೆ ಟಿಪ್ಪರ್ ಚಕ್ರಗಳು ಹರಿದಿವೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.
ಟಿಪ್ಪರ್ ಚಾಲಕನ ಅಜಾಗರೂಕತೆ ಹಾಗೂ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ. ಆತನನ್ನು ಬಂಧಿಸಿ ವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಹುಳಿಮಾವು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.