ಬೆಂಗಳೂರು: ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಶೇಷಾದ್ರಿರಸ್ತೆಯ ಸ್ವಾತಂತ್ರ್ಯ ಉದ್ಯಾನದಲ್ಲಿ ಜ.27ರಂದು ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ಪ್ರತಿಭಟನೆ ಇರುವುದರಿಂದ ಉದ್ಯಾನದ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದೆ.
* ಶಾಂತಾಲಾ ಜಂಕ್ಷನ್ ಮತ್ತು ಖೋಡೆ ವೃತ್ತದಿಂದ ಆನಂದ ರಾವ್ ಮೇಲ್ಸೇತುವೆ, ಜೆಡಿಎಸ್‌ನ ಹಳೆಯ ಕಚೇರಿ, ಶೇಷಾದ್ರಿ ರಸ್ತೆಯಿಂದ ಫ್ರೀಡಂ ಪಾರ್ಕ್ ಕಡೆಗೆ
* ಮೈಸೂರು ಬ್ಯಾಂಕ್ ಜಂಕ್ಷನ್ ಕಡೆಯಿಂದ ಚಾಲುಕ್ಯ ವೃತ್ತದ ಕಡೆಗೆ
* ಚಾಲುಕ್ಯ ವೃತ್ತದಿಂದ ಮೈಸೂರು ಬ್ಯಾಂಕ್ ಕಡೆಗೆ
* ಕಾಳಿದಾಸ ರಸ್ತೆಯಲ್ಲಿ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ
* ಮೌರ್ಯ/ಸುಬ್ಬಣ್ಣ ಜಂಕ್ಷನ್‌ನಿಂದ ಸ್ವಾತಂತ್ರ್ಯ ಉದ್ಯಾನದ ಕಡೆಗೆ
* ಲುಲು ಮಾಲ್, ಕೆಎಫ್‍ಎಂ, ರಾಜೀವ್ ಗಾಂಧಿ ವೃತ್ತ, ಮಂತ್ರಿ ಮಾಲ್, ಸ್ವಸ್ತಿಕ್ ವೃತ್ತ, ಶೇಷಾದ್ರಿಪುರ, ನೆಹರೂ ವೃತ್ತ, ರೇಸ್ ಕೋರ್ಸ್ ಮೇಲ್ಸೇತುವೆ ಮೂಲಕ ಸಂಚರಿಸಬಹುದು
* ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ ಜಂಕ್ಷನ್, ಎಲೈಟ್, ಟಿ.ಬಿ ರಸ್ತೆ, ಕೆಎಫ್‌ಎಂ, ರಾಜೀವ್ ಗಾಂಧಿ ವೃತ್ತ, ಸ್ವಸ್ತಿಕ್, ನೆಹರೂ ವೃತ್ತ, ರೇಸ್ ಕೋರ್ಸ್ ಮೇಲ್ಸೇತುವೆ ರಸ್ತೆಯ ಮೂಲಕ ವಾಹನಗಳು ಸಂಚರಿಸಬಹುದು
* ಚಾಲುಕ್ಯ ವೃತ್ತ, ಎಲ್‌ಆರ್‌ಡಿ, ರಾಜಭವನ ರಸ್ತೆ, ಇನ್‌ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್ ವೃತ್ತದ ಮೂಲಕ ಸಂಚರಿಸಬಹುದಾಗಿದೆ
* ಸುಬ್ಬಣ್ಣ ಜಂಕ್ಷನ್‌ನಿಂದ ಬಲಕ್ಕೆ ತಿರುವು ಪಡೆದು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.