ADVERTISEMENT

ಪಾನಮತ್ತರಾಗಿ ವಾಹನ ಚಾಲನೆ: 1,784 ಮಂದಿ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 14:50 IST
Last Updated 26 ಡಿಸೆಂಬರ್ 2025, 14:50 IST
<div class="paragraphs"><p>ಎಫ್‌ಐಆರ್</p></div>

ಎಫ್‌ಐಆರ್

   

ಬೆಂಗಳೂರು: ಪಾನಮತ್ತರಾಗಿ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ನಗರ ಸಂಚಾರ ಪೊಲೀಸರು, ನಾಲ್ಕು ದಿನಗಳಲ್ಲಿ ನಿಯಮ ಉಲ್ಲಂಘಿಸಿದ್ದ 1,784 ವಾಹನ ಚಾಲಕರು ಹಾಗೂ ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಡಿ.22ರಿಂದ 25ರ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಈ ಅವಧಿಯಲ್ಲಿ 1,27,938 ವಾಹನಗಳನ್ನು ತಪಾಸಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ರೀತಿಯ ಕಾರ್ಯಾಚರಣೆ ಮುಂದುವರೆಸಲಾಗುವುದು ಎಂದು ಪೊಲೀಸರು ಹೇಳಿದರು.