ADVERTISEMENT

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: ಒಂಬತ್ತು ದಿನದಲ್ಲಿ 23,356 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 30 ಜನವರಿ 2026, 14:22 IST
Last Updated 30 ಜನವರಿ 2026, 14:22 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಏಕಮುಖ ಸಂಚಾರ ರಸ್ತೆಗಳಲ್ಲಿ ವಿರುದ್ಧವಾಗಿ ಚಾಲನೆ ಮಾಡಿದ ದ್ವಿಚಕ್ರ ವಾಹನ ಸವಾರರು ಹಾಗೂ ವಾಹನ ಚಾಲಕರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಸಂಚಾರ ಪೊಲೀಸರು, ಒಂಬತ್ತು ದಿನಗಳಲ್ಲಿ 23,356 ಪ್ರಕರಣ ದಾಖಲು ಮಾಡಿದ್ದಾರೆ.

ರಸ್ತೆ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಜ.21ರಿಂದ 29ರವರೆಗೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ, ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಸಾರ್ವಜನಿಕರ ಸುರಕ್ಷಿತ ಸಂಚಾರವನ್ನು ಗಮನದಲ್ಲಿ ಇಟ್ಟುಕೊಂಡು ನಿರಂತರವಾಗಿ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.