ADVERTISEMENT

ನೋ ಪಾರ್ಕಿಂಗ್ ಜಾಗದಲ್ಲಿ ವಾಹನಗಳ ನಿಲುಗಡೆ: ಟೋಯಿಂಗ್ ಆರಂಭಿಸುವ ಬಗ್ಗೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 6:00 IST
Last Updated 17 ಸೆಪ್ಟೆಂಬರ್ 2022, 6:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ನಗರದ ನೋ ಪಾರ್ಕಿಂಗ್ ಜಾಗ ಹಾಗೂ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸುವ ವಾಹನಗಳ ಟೋಯಿಂಗ್ ಪುನಃ ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಟೋಯಿಂಗ್ ಬಗ್ಗೆ ಪರಿಶೀಲನೆಗೆ ಹೈಕೋರ್ಟ್ ಕಾಲಾವಕಾಶ ನೀಡಿದೆ. ಈ ಬಗ್ಗೆ ಇಲಾಖೆ ಸದ್ಯದಲ್ಲೇ ತೀರ್ಮಾನಿಸಲಿದೆ’ ಎಂದರು.

‘ನಗರದಲ್ಲಿ ರಸ್ತೆ ಸಂಚಾರಕ್ಕೆ ಅಡ್ಡವಾಗಿ ನಿಲ್ಲಿಸುವ ವಾಹನಗಳನ್ನು ಟೋಯಿಂಗ್ ಮಾಡಬೇಕಾದ ಅವಶ್ಯಕತೆಯಿದೆ. ಆದರೆ, ಟೋಯಿಂಗ್ ನಿಯಮದಲ್ಲಿ ಕೆಲ ಲೋಪದೋಷ ಇರುವ ದೂರುಗಳು ಕೇಳಿಬಂದಿವೆ. ಯಾವ ಸ್ಥಳದಲ್ಲಿ ಹಾಗೂ ಯಾವ ರೀತಿ ಟೋಯಿಂಗ್ ಮಾಡಬೇಕು ಎಂಬುದನ್ನು ಪರಿಶೀಲಿಸಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.