
ಪ್ರಜಾವಾಣಿ ವಾರ್ತೆ
ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಪಾಲನೆ ಹಾಗೂ ಏಕಮುಖ ರಸ್ತೆ ಸಂಚಾರ ಮಾಡಿದ್ದವರ ವಿರುದ್ಧ ಟ್ರಾಫಿಕ್ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, 8,941 ಪ್ರಕರಣ ದಾಖಲಿಸಿದ್ದಾರೆ.
ಸಾರ್ವಜನಿಕ ಸುರಕ್ಷತಾ ಸಂಚಾರ ಗಮನದಲ್ಲಿಟ್ಟುಕೊಂಡು ಜ. 21, 22 ಮತ್ತು 23 ರಂದು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ವಾಹನ ಸವಾರರಿಗೆ ದಂಡ ಹಾಕಿದ್ದಾರೆ.
ಶುಕ್ರವಾರ ಬೆಳಿಗ್ಗೆ 7 ರಿಂದ 10ರವರೆಗೆ ನಡೆಸಿದ್ದ ತಪಾಸಣಾ ಸಂದರ್ಭದಲ್ಲಿ 26 ಶಾಲಾ ವಾಹನ ಚಾಲಕರ ವಿರುದ್ಧ ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. 5,110 ಶಾಲಾ ವಾಹನಗಳ ತಪಾಸಣೆ ನಡೆಸಿದ್ದಾರೆ.
ಕುಡಿದು ವಾಹನ ಚಾಲನೆ ಮಾಡುತ್ತಿದ್ದ ಚಾಲಕರ ಪರವಾನಗಿ ರದ್ದುಪಡಿಸಲು ಆರ್‌ಟಿಒ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.