ಬೆಂಗಳೂರು: ಸಂಚಾರ ದಟ್ಟಣೆ ಸುಧಾರಣೆಗೆ ಆಗಸ್ಟ್ ಅಂತ್ಯದ ವೇಳೆಗೆ ಇನ್ನೂ 50ಕ್ಕೂ ಹೆಚ್ಚು ಹೊಸ ಸಿಗ್ನಲ್‌ಗಳನ್ನು ಅಳವಡಿಸಲಾಗುವುದು ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ನಗರದಲ್ಲಿ ಹೆಚ್ಚುತ್ತಿರುವ ವಾಹನಗಳಿಂದ ಸಂಚಾರ ದಟ್ಟಣೆ ದಿನೇ ದಿನೇ ಹೆಚ್ಚುತ್ತಿದೆ. ಮೂರು ವರ್ಷಗಳಲ್ಲಿ 100 ಹೊಸ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ. ಸದ್ಯ ನಗರದಲ್ಲಿ 501 ಸಿಗ್ನಲ್‌ಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.
ನಗರದ ವಿಸ್ತೀರ್ಣ ಹೆಚ್ಚಾಗುತ್ತಿದೆ. ಹೊಸ ವಾಹನಗಳ ಖರೀದಿಯೂ ಹೆಚ್ಚುತ್ತಿದೆ. ಈ ಸಂಬಂಧ ಸುಗಮ ಸಂಚಾರಕ್ಕೆ ಅಧಿಕ ಸಿಗ್ನಲ್‌ಗಳ ಅಳವಡಿಕೆ ಮಾಡಲಾಗುತ್ತಿದೆ. ಸದ್ಯ 501 ಸಿಗ್ನಲ್‌ಗಳ ಪೈಕಿ 197 ಅಡಾಪ್ಟಿವ್ ಸಿಗ್ನಲ್‌ಗಳು ಮತ್ತು 304 ಸ್ಥಿರ ಸಮಯ ಸಿಗ್ನಲ್‌ಗಳು ಇವೆ. ಹೊಸದಾಗಿ ಸ್ಥಾಪಿಸುವ 50 ಸಿಗ್ನಲ್‌ಗಳು ಸ್ಥಿರ ಸಿಗ್ನಲ್‌ಗಳಾಗಿ ಕಾರ್ಯ ನಿರ್ವಹಿಸಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.