ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರಿಂದ ಪೊಲೀಸರು ದಂಡ ಪಾವತಿಸಿಕೊಳ್ಳುತ್ತಿರುವ ಚಿತ್ರಣ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ 50ರ ರಿಯಾಯಿತಿ ಅಡಿ ದಂಡ ಪಾವತಿಸಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದ್ದು, ಆ.23ರಿಂದ ಸೆ.4ರ ವರೆಗೆ 14,02,717 ಪ್ರಕರಣಗಳು ಇತ್ಯರ್ಥಗೊಂಡಿವೆ. ₹39.41 ಕೋಟಿ ದಂಡ ಸಂಗ್ರಹವಾಗಿದೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡ ಪಾವತಿಸಲು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.
ಈ ಆದೇಶವು ಆ.23ರಿಂದ ಜಾರಿಗೆ ಬಂದಿದ್ದು, ಸೆ.12ರ ವರೆಗೆ ರಿಯಾಯಿತಿ ಇರಲಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.